ಬೆಂಗಳೂರು,ಮೇ.31(DaijiworldNews/AK):ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು ಬಂಧನ ಆಗುವ ಸಾಧ್ಯತೆಯಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ) ಆರೋಪದಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗಿನಿದ ಭವಾನಿ ರೇವಣ್ಣ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಸದ್ಯ ಅಜ್ಞಾತವಾಸಿಯಾಗಿರುವ ಭವಾನಿ ರೇವಣ್ಣಗೆ ಎಸ್ಐಟಿ ನೋಟಿಸ್ ನೀಡಿದ್ದು, ನಾಳೆ ತನಿಖೆ ಹಾಜರಾಗುವಂತೆ ಸೂಚನೆ ನೀಡಿದೆ.
ಮೇ 15ರಂದು ಎಸ್ಐಟಿ ನೀಡಿದ ನೋಟಿಸ್ಗೆ ಹೊಳೆನರಸೀಪುರದ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಆದರೆ ಈವರೆಗೂ ನೋಟಿಸ್ಗೆ ಯಾವುದೇ ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮ ವಿಚಾರಣೆಯ ಅವಶ್ಯಕತೆ ಇದೆ.
ಜೂನ್ 1ರಂದು ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆ ಒಳಗೆ ಮಹಿಳಾ ಅಧಿಕಾರಿಗಳೊಂದಿಗೆ ನಿಮ್ಮ ಮನೆಗೆ ಬರುತ್ತೇವೆ. ಈ ವೇಳೆ ನೀವು ಮನೆಯಲ್ಲಿ ಖುದ್ದು ಹಾಜರು ಇರಬೇಕು ಎಂದು ಎಸ್ಐಟಿ ತನಿಖಾಧಿಕಾರಿ ಹೇಮಂತ್ಕುಮಾರ್ ನೋಟಿಸ್ನಲ್ಲಿ ತಿಳಿಸಿದ್ದಾರೆ.