ಬೆಂಗಳೂರು, ಜೂ 01(DaijiworldNews/AA): ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ ಸಂಬಂಧ ಜೂನ್ 7 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಇಂದು ಪ್ರಕರಣದ ವಿಚಾರಣೆ ಮಾಡಿದ ಕೋರ್ಟ್ ಹಾಜರಾತಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿನಾಯಿತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ, ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆದೇಶಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು ಇಂದು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು.
ಚುನಾವಣಾ ನಿಮಿತ್ತ ಕೋರ್ಟ್ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ರಾಹುಲ್ ಗಾಂಧಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆ ವಿಚಾರಣೆ ಬಳಿಕ ಜೂ.7ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.