ಶ್ರೀನಗರ, ಜೂ 04(DaijiworldNews/ AK) :ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.
ಐಎನ್ಡಿಐಎ ಒಕ್ಕೂಟ ಜಮ್ಮು ಮತ್ತು ಕಾಶ್ಮೀರದಲ್ಲಿ 5 ರ ಪೈಕಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್ಡಿಎಗೆ 1 ಸ್ಥಾನ ಸಿಕ್ಕಿದೆ .ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪೈಕಿ ಒಮರ್ ಅಬ್ದುಲ್ಲಾ ಮುನ್ನಡೆಯಲ್ಲಿದ್ದಾರೆ. ಆದರೆ ಮೆಹಬೂಬಾ ಮುಫ್ತಿ ಅವರು 60,000 ಮತಗಳ ಹಿನ್ನಡೆಯಲ್ಲಿ ಇದ್ದಾರೆ.
ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಒಮರ್ ಅಬ್ದುಲ್ಲಾ ಅವರು ತಮ್ಮ ಪ್ರತಿಸ್ಪರ್ಧಿ ಜೆ & ಕೆ ಪೀಪಲ್ಸ್ ಕಾನ್ಫರೆನ್ಸ್ ನ ಸಜಾದ್ ಗನಿ ಲೋನ್ ಅವರಿಗಿಂತ ಮುನ್ನಡೆಯಲ್ಲಿದ್ದಾರೆ.