ಬೆಂಗಳೂರು, ಜೂ 04(DaijiworldNews/MS): ಈ ಹಿಂದೆ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಈಗ ಸಂಸದರಾಗುತ್ತಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸುಮಾರು ಎರಡು ವರ್ಷಗಳಿಗೂ ಹೆಚ್ಚು ಅವಧಿಗೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್ಗೆ ಸೇರಿದ್ದ ಸಸಿಕಾಂತ್ ಸೆಂಥಿಲ್ ಅವರು ಇದೀಗ ಲೋಕಸಭೆ ಪ್ರವೇಶಿಸುತ್ತಿದ್ದಾರೆ. ಸೆಂಥಿಲ್ ಅವರು ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದರು.
ಅವರು ಇದೀಗ ಡಿಎಂಕೆಯ ನಲ್ಲತಂಬಿ ಕೆ. ವಿರುದ್ಧ 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸೆಂಥಿಲ್ ಅವರು ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ, ಅತ್ಯುತ್ತಮ ಹಾಗೂ ದಕ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಇದೀಗ ಅಧಿಕಾರಿಯಿಂದ ರಾಜಕಾರಣಿಯಾಗಿ ಮತ್ತೆ ಜನಸೇವೆ ಮಾಡುವತ್ತ ಗಮನಹರಿಸಲಿದ್ದಾರೆ.