ನವದೆಹಲಿ, ಮೇ 10 (Daijiworld News/MSP): ಅಯೋಧ್ಯೆಯ ರಾಮ ಜನ್ಮಭೂಮಿ -ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ’ಮಧ್ಯಸ್ಥಿಕೆ ’ ಸಮಿತಿ ನೀಡಿದ ವರದಿಯ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಆಗಸ್ಟ್ 15ಕ್ಕೆ ಮುಂದೂಡಿದೆ.
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಎಫ್.ಎಂ. ಖಲೀಫುಲ್ಲಾ ನೇತೃತ್ವದ ತ್ರಿಸದಸ್ಯ ಮಧ್ಯಸ್ಥಿಕೆ ಸಮಿತಿಯೂ ಪ್ರಕರಣದ ಸೌಹಾರ್ದಯುತ ಮತ್ತು ಶಾಶ್ವತ ಪರಿಹಾರಕ್ಕೆ ಸಮಯಾವಕಾಶ ನೀಡಿ ಎಂದು ವಿನಂತಿಸಿಕೊಂಡ ಹಿನ್ನಲೆಯಲ್ಲಿ ಆಗಸ್ಟ್ 15ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿದೆ.
ಮಾರ್ಚ್ 8ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ಪಂಚ ಸದಸ್ಯ ಪೀಠವು ಆದೇಶವನ್ನು ನೀಡಿ ಸಂಧಾನಕ್ಕಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎಫ್.ಎಂ. ಖಲೀಫುಲ್ಲಾ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ‘ಸಂಧಾನ ತಂಡ’ವನ್ನು ರಚಿಸಿತ್ತು. ಅಲ್ಲದೆ ಸಂಧಾನ ತಂಡವು 8 ವಾರಗಳಲ್ಲಿ ತನ್ನ ವರದಿಯನ್ನು ಸೋರಿಕೆಯಾಗದಂತೆ ಕೊಡಬೇಕು ಎಂದು ಪೀಠವು ಆಜ್ಞಾಪಿಸಿತು. ಇಂದು ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಸಂಧಾನ ತಂಡವೂ ಪ್ರಕರಣದ ಇತ್ಯರ್ಥಕ್ಕೆ ಯಾವುದೇ ಕ್ರಮ ತೆಗೆದುಕೊಂಡರು ನಾವು ಬದ್ಧವಾಗಿದ್ದೇವೆ ಎಂದು ಮುಸ್ಲಿಂ ಪಾರ್ಟಿ ಒಪ್ಪಿಗೆ ಸೂಚಿಸಿದರು. ಆದರೆ ನಿರ್ಮೋಹಿ ಅಖಾರ ಸಂಧಾನ ಸಭೆಯ ಬಗ್ಗೆ ತಕಾರರು ಎತ್ತಿದ್ದಾರೆ . ಈ ಹಿನ್ನಲೆಯಲ್ಲಿ ಸಾಂವಿಧಾನಿಕ ಪೀಠವೂ ತ್ರಿಸದಸ್ಯ ಸಂಧಾನ ತಂಡ ಕಾರ್ಯಕ್ಕೆ ವ್ಯಕ್ತಪಡಿಸಿ ಮತ್ತಷ್ಟು ಕಾಲಾವಕಾಶ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.