ಕೊಲ್ಕತ್ತಾ,ಮೇ11(DaijiworldNews/AZM):ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಫೋಟೋವನ್ನು ಎಡಿಟ್ ಮಾಡಿ, ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟ ಬಿಜೆಪಿ ಸಂಚಾಲಕಿ ಪ್ರಿಯಾಂಕ ಶರ್ಮಾಳನ್ನು ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಹಾಗೂ ಆಕೆಯನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಗುರಿಪಡಿಸಲಾಗಿದೆ.
ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ 'ಎಂಇಟಿ ಗಾಲಾ - 2019' ಫ್ಯಾಷನ್ ಶೋನಲ್ಲಿ ಕಾಣಿಸಿಕೊಂಡ ರೀತಿಯಲ್ಲಿ ಮಮತಾ ಬ್ಯಾನರ್ಜಿಯ ಚಿತ್ರವನ್ನು ಎಡಿಟ್ ಮಾಡಿದ ಬಿಜೆಪಿ ನಾಯಕಿ ಫೇಸ್ ಬುಕ್ ನಲ್ಲಿ ಅದನ್ನು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರಿಗೆ ದೂರು ನೀಡಿದ ತೃಣಮೂಲ ಕಾಂಗ್ರೆಸ್ ಮುಖಂಡ ವಿಭಾಸ್ ಹಜ್ರಾ ಎನ್ನುವವರು ಇದೊಂದು ಸೈಬರ್ ಕ್ರೈಂ ಆಗಿದ್ದು, ಮಮತಾ ಬ್ಯಾನರ್ಜಿಯವರ ಸಂಸ್ಕೃತಿಯನ್ನು ಅವಮಾನಿಸುವ ಕೆಲಸವಾಗಿದೆ ಎಂದು ಹೇಳಿದ್ದಾರೆ.