ಹುಬ್ಬಳ್ಳಿ,ಮೇ11(DaijiworldNews/AZM): ಸಚಿವ ಡಿ.ಕೆ.ಶಿವಕುಮಾರ್ ರವರು ನನ್ನ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಮಾಡಲಿ' ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ಕುಂದುಕೋಳ ಉಪಚುನಾವಣೆ ಹಿನ್ನಲೆ ನಡೆದ ಪ್ರಚಾರ ಕಾರ್ಯದಲ್ಲಿ ಈ ಕುರಿತು ಅವರು ಮಾತನಾಡಿದರು. 'ನಾನು ರಾಜ್ಯ ರಾಜಕಾರಣ ಬಿಟ್ಟು ಎಲ್ಲೂ ಹೋಗಲ್ಲ. ಹೈಕಮಾಂಡ್ ರಾಷ್ಟ್ರಮಟ್ಟದ ಹೊಣೆ ಕೊಟ್ಟರೂ ಬೇಡ. ಲೋಕಸಭಾ ಫಲಿತಾಂಶದ ಬಳಿಕ ರಾಜ್ಯದಲ್ಲಿ ಬದಲಾವಣೆಯಾಗುವುದು ನಿಶ್ಚಿತ. ಸಚಿವ ಡಿಕೆ ಶಿವಕುಮಾರ್ ನನ್ನ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಮಾಡಲಿ' ಎಂದು ಹೇಳಿದ್ದಾರೆ.
ಇನ್ನು ಈ ಕುರಿತು ಮುಂದುವರಿದು ಮಾತನಾಡಿದ ಬಿ ಎಸ್ ವೈ ಮೈತ್ರಿ ಸರ್ಕಾರ ಪತನವಾಗುತ್ತೆ. ನಾನು ಸಿಎಂ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. '104+2+3 ಸೇರಿ ನಮ್ಮ ಬಳಿ 109 ಶಾಸಕರ ಬಲವಿದೆ. ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು ಎಂದರು.