ಹೊಸದಿಲ್ಲಿ,ಮೇ12(DaijiworldNews/AZM): ಪ್ರಸಕ್ತ ಲೋಕಸಭಾ ಚುನಾವಣೆಯ 6 ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ದಿಲ್ಲಿ ಸಹಿತ 7 ರಾಜ್ಯಗಳ 59 ಕ್ಷೇತ್ರಗಳಲ್ಲಿ ಇಂದು ಹಕ್ಕು ಚಲಾವಣೆಯಾಗಲಿದೆ.
6ನೇ ಹಂತದ ಚುನಾವಣೆಯಲ್ಲಿ ಒಟ್ಟು 979 ಅಭ್ಯರ್ಥಿಗಳು ಕಣದಲ್ಲಿದ್ದು, 10.17 ಕೋಟಿ ಮತದಾರರು ಈ ಅಭ್ಯರ್ಥಿಗಳ ಹಣೆಬರಹವನ್ನು ನಿರ್ಧರಿಸಲಿದ್ದಾರೆ.ಉತ್ತರಪ್ರದೇಶದ 14, ಹರಿಯಾಣದ 10, ಬಿಹಾರ, ಮಧ್ಯಪ್ರದೇಶ ಮತ್ತು ಪ.ಬಂಗಾಲದ ತಲಾ 8, ದಿಲ್ಲಿಯ 7 ಮತ್ತು ಝಾರ್ಖಂಡ್ನ 4 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಇಂದು ಚುನಾವಣೆ ಎದುರಿಸಲಿ ರುವ 59 ಕ್ಷೇತ್ರಗಳ ಪೈಕಿ 45 ಕ್ಷೇತ್ರಗಳನ್ನು 2014ರಲ್ಲಿ ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ದಿಲ್ಲಿಯಲ್ಲಿ ಈ ಬಾರಿ ಆಪ್-ಕಾಂಗ್ರೆಸ್-ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಉತ್ತರಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಕೂಡ ಬಿಜೆಪಿಯ ಲೆಕ್ಕಾಚಾರಕ್ಕೆ ಪೆಟ್ಟು ಕೊಡಲಿ ದೆಯೇ ಎಂಬ ಶಂಕೆಯಿದೆ. ಇನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ರನ್ನು ಬಿಜೆಪಿ ಕಣಕ್ಕಿಳಿಸಿದೆ.