ನವದೆಹಲಿ, ಜೂ. 05(DaijiworldNews/Ak): ದೆಹಲಿಯಲ್ಲಿ ಎನ್ಡಿಎನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು.
ಸಭೆಯಲ್ಲಿ ಅವರನ್ನು ಎನ್ಡಿಎ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಎನ್ಡಿಎ ಸರ್ಕಾರ ರಚನೆಗೆ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ.