ಬೆಂಗಳೂರು, ಜೂ. 06(DaijiworldNews/AK):ಸಚಿವ ನಾಗೇಂದ್ರ ಅವರೊಂದಿಗೆ ಮಾತನಾಡಿದ್ದೇನೆನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಇರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ದೇವರಾಜ ಅರಸುರವರ 42ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ರಾಜೀನಾಮೆ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ನಾಗೇಂದ್ರ ಅವರೊಂದಿಗೆ ಮಾತನಾಡಿದ್ದೇನೆ. ನೋಡೋಣ ಎಂದು ಹೇಳಿದರು.
ದೇವರಾಜ ಅರಸು ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಎಂಟು ವರ್ಷಗಳ ಕಾಲ ಸಾಮಾಜಿಕ ನ್ಯಾಯದ ಅಡಿಪಾಯ ಹಾಕಿದರು. ಅದರ ಬುನಾದಿಯ ಮೇಲೆ ಸಾಮಾಜಿಕ ನ್ಯಾಯ ಕರ್ನಾಟಕದಲ್ಲಿ ಮುಂದುವರೆದಿದೆ ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ಇತರೆ ಪಕ್ಷಗಳಿಗೆ ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲ. ಬದಲಿಗೆ ಅದರ ವಿರುದ್ಧವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.