ತುಮಕೂರು, ಜೂ 13 (DaijiworldNews/ AK): ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಬಂಧಿಸುತ್ತಾರೆ. ಅಗತ್ಯ ಇದೆ ಅಂತ ನಾನು ಹೇಳಲು ಆಗುವುದಿಲ್ಲ ಎಂ ದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋ ರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣ ಗೊಳಿಸುತ್ತಾರೆ. ಯಡಿಯೂರಪ್ಪ ಅವರಿಂದಲೂ
ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಹೈದರಾಬಾದ್ನಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು.