ಕೋಲಾರ,ಮೇ13(DaijiworldNews/AZM):ಭ್ರಷ್ಟಾಚಾರ ರಹಿತ ಆಡಳಿತವನ್ನು ರಾಜ್ಯದಲ್ಲಿ ನಡೆಸಲು ಸಿದ್ದರಾಮಯ್ಯನವರಿಂದ ಮಾತ್ರ ಸಾಧ್ಯ ಎಂದು ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ.
ಈ ಕುರಿತು ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ದೇವರಾಜು ಅರಸು ಸರ್ಕಾರ ಮತ್ತು ಸಿದ್ದರಾಮಯ್ಯ ಅವರ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಬಾರಿಯೂ ಚೆಕ್ ಬೌನ್ಸ್ ಆಗದೇ ಸರ್ಕಾರ ನಡೆಸಿದ ನಾಯಕರಾಗಿದ್ದಾರೆ. ನಾನು ಸಿದ್ದರಾಮಯ್ಯ ಅವರ ಪಕ್ಕಾ ಶಿಷ್ಯಾ ಎಂದು ಹೇಳಿದರು.
ಸಿದ್ದರಾಮಯ್ಯನವರು ಭ್ರಷ್ಟಾಚಾರ ನಡೆಸದ ಶಾಸಕರನ್ನು ಅವರ ಮನೆಗೆ ಊಟಕ್ಕೆ ಕರೆಯುತ್ತಿದ್ದರು. ಅವರು ಕ್ಷೇತ್ರದ ಅಭಿವೃದ್ಧಿಗೆ ಕೇಳಿದಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದಂತಹ ಸಿಎಂ ಆಗಿದ್ದರು ಎಂದ ಅವರು
ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಡಳಿತ ನಡೆಸುವ ಒಳ್ಳೆಯ ಯೋಜನೆಗಳಿವೆ. ಆದರೆ ಅವರನ್ನು ಅಧಿಕಾರ ಮಾಡಲು ಬಿಡುತ್ತಿಲ್ಲ ಎಂದು ಹೇಳಿದರು.