ಶ್ರೀನಗರ, ಜೂ. 19(DaijiworldNews/AA): ರಿಯಾಸಿಯಲ್ಲಿ ಇತ್ತೀಚೆಗೆ ಯಾತ್ರಾರ್ಥಿಗಳ ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಇಂದು ಬಂಧಿಸಿದ್ದಾರೆ.
ಯಾತ್ರಾರ್ಥಿಗಳ ಬಸ್ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಮೊದಲ ಆರೋಪಿಯ ಬಂಧನವಾಗಿದೆ. ಬಂಧಿತ ಆರೋಪಿಯು ಈ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಅಲ್ಲ. ಆದರೆ, ಈತ ಈ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿ ಹಕೀಮ್ ದಿನ್ ರಾಜೌರಿ ನಿವಾಸಿಯಾಗಿದ್ದಾನೆ. ಹಾಗೂ ಈ ದಾಳಿಗೆ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಒದಗಿಸಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 9 ರಂದು ರಿಯಾಸಿ ಜಿಲ್ಲೆಯಲ್ಲಿ ಉಗ್ರರು ಯಾತ್ರಾರ್ಥಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಮಹಿಳೆಯರು ಸೇರಿದಂತೆ 9 ಜನರು ಸಾವನ್ನಪ್ಪಿದರು. ಘಟನೆಯಲ್ಲಿ 33 ಜನ ಗಾಯಗೊಂಡಿದ್ದರು.