ಪಟ್ನಾ, ಜೂ 20 (DaijiworldNews/ AK): ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ 50ರಿಂ ದ 65ಕ್ಕೆ ಹೆಚ್ಚಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಟ್ನಾ ಹೈಕೋರ್ಟ್ ಗುರುವಾರ ತಳ್ಳಿ ಹಾಕಿದೆ.
ಮುಖ್ಯ ನ್ಯಾಯಮೂರ್ತಿ ಕೆ.ವಿನೋ ದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠವು ಗುರುವಾರ ಈ ಆದೇ ಶ ಪ್ರಕಟಿಸಿದೆ. ಇದರಿಂದ ಮುಖ್ಯಮಂತ್ರಿ ನಿತೀತ್ ಕುಮಾರ್ ಅವರಿಗೆ ಭಾರಿ ಹಿನ್ನಡೆಯಾಗಿದೆ ಎನ್ನಲಾಗಿದೆ.
2023ರ ನವೆಂಬರ್ 21ರಂದು ಮೀಸಲಾತಿಯನ್ನು ಶೇ50ರಿಂದ 65ಕ್ಕೆ ಏರಿಕೆ ಮಾಡುವ ಪ್ರಸ್ತಾವಕ್ಕೆ ಬಿಹಾರ ಸಚಿವ ಸಂಪುಟ ಅನುಮೋದನೆ ನೀಡಿ, ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹಲವು ಮಂದಿ ಮೇ ಲ್ಮನವಿಗಳನ್ನು ಹೈಕೋರ್ಟಿ ಗೆ ಸಲ್ಲಿಸಿದ್ದರು.
ಅರ್ಜಿದಾರರ ಪರವಾದ ಮಂಡಿಸಿದ ವಕೀಲೆ ರಿತಿಕಾ ರಾಣಿ, ಮೀಸಲಾತಿ ಜಾರಿ ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಎರಡೂ ಕಡೆಯ ವಾದ ಆಲಿಸಿದ ಬಳಿಕ ನ್ಯಾಯಾಲಯಮಾರ್ಚ್ ನಲ್ಲಿ ತೀ ರ್ಪನ್ನು ಕಾಯ್ದಿರಿಸಿತ್ತು.