ಕಲಬುರಗಿ, ಮೇ 13 (Daijiworld News/SM): 'ಮೇ 23ರ ಬಳಿಕ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆಗಳು ಎದುರಾಗದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಬಿಜೆಪಿಯವರು ಆರಂಭದಿಂದಲೂ ಮೈತ್ರಿ ಸರಕಾರ ಪತನವಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ಅದು ದೂರದ ಮಾತು ಎಂದು ಟೀಕಿಸಿದ್ದಾರೆ.
'ಮೇ 23ರ ಬಳಿಕ ರಾಜ್ಯದಲ್ಲಿ ಯಾವುದೇ ಬದಲಾವಣೆಯಾಗದು. ಅದರ ಬದಲು ರಾಷ್ಟ್ರ ರಾಜಕಾರಣದಲ್ಲಿ ಹೊಸ ಪರ್ವ ಆರಂಭಗೊಳ್ಳಲಿದೆ. ಮೋದಿ ಸರಕಾರ ಅಧಿಕಾರದಿಂದ ಇಳಿಯಲಿದೆ ಎಂದು ಭವಿಷ್ಯ ನುಡಿದರು.
ರಾಜ್ಯದಲ್ಲಿ ಇದುವರೆಗೆ ಮೈತ್ರಿ ಸರಕಾರ ಉತ್ತಮ ಆಡಳಿತ ನೀಡಿದೆ. ಈ ತನಕ ರಾಜ್ಯದ ಮೈತ್ರಿ ಸರ್ಕಾರಕ್ಕೆ ಏನೂ ಕಂಟಕವಾಗಿಲ್ಲ. ಸಮ್ಮಿಶ್ರ ಸರ್ಕಾರ ಐದು ವರ್ಷಗಳನ್ನು ಪೂರೈಸಲಿದೆ. ಮೇ 23ರ ಬಳಿಕ ಬಿಜೆಪಿಯವರೇ ಕಾಂಗ್ರೆಸ್ ಸೇರಲಿದ್ದಾರೆ. ಕಾಂಗ್ರೆಸ್ನ ಯಾವ ಶಾಸಕರು ಬಿಜೆಪಿಗೆ ಹೋಗುವುದಿಲ್ಲ' ಎಂದು ಹೇಳಿದ್ದಾರೆ.