ಬಳ್ಳಾರಿ,ಜೂ 21 (DaijiworldNews/MS): ರಾಜ್ಯ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಪೆಟ್ರೋಲ್ , ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ . ರಾಜ್ಯದ ಅಭಿವೃದ್ಧಿ ಯೋಜನೆಗಳಿಗಾಗಿ ತೈಲ ದರ ಏರಿಕೆ ಮಾಡಲಾಗಿದೆ. ಖಾತರಿ ಯೋಜನೆಗಳಿಗೆ ಈ ವರ್ಷ 60 ಸಾವಿರ ಕೋಟಿ ಅಗತ್ಯವಿದ್ದು, ಸಂಪನ್ಮೂಲ ಕ್ರೋಢೀಕರಣ ಮಾಡಬೇಕಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಕುರಿತಂತೆ ಬರುವ ಸೋಮವಾರ ಸಭೆ ನಡೆಸಲಾಗುವುದು. ಇದಕ್ಕೂ ಮುನ್ನ ಸಂಬಂಧಪಟ್ಟ ಸಚಿವರು ಮಾತುಕತೆ ನಡೆಸಲಿದ್ದಾರೆ . ತುಂಗಭದ್ರಾ ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ಸಂಬಂಧ ಶೀಘ್ರದಲ್ಲೇ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.