ನವದೆಹಲಿ, ಜೂ. 21 (DaijiworldNews/AA): ದೇಶದಲ್ಲಿ ಸರ್ವಾಧಿಕಾರ ಎಲ್ಲ ಮಿತಿಗಳನ್ನು ಮೀರಿದೆ. ಕೇಂದ್ರ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಸುನೀತಾ ಕೇಜ್ರಿವಾಲ್ ಆರೋಪ ಮಾಡಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಆದೇಶವನ್ನು ಅಪ್ಲೋಡ್ ಮಾಡುವ ಮೊದಲೇ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್ ಗೆ ತಲುಪಿದೆ. ಅವರು ಭಯೋತ್ಪಾದಕನಂತೆ ವರ್ತಿಸುತ್ತಿದ್ದಾರೆ. ಕೋರ್ಟ್ ಜಾಮೀನು ಆದೇಶವನ್ನು ಅಧಿಕೃತವಾಗಿ ಅಪ್ಲೋಡ್ ಮಾಡುವ ಮುನ್ನವೇ ಇಡಿ ಹೈಕೋರ್ಟ್ ನ ಮೆಟ್ಟಿಲೇರಿರುವುದಕ್ಕೆ ಸುನಿತಾ ಕೇಜ್ರಿವಾಲ್ ಇಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಸರ್ವಾಧಿಕಾರವು ಎಲ್ಲಾ ಮಿತಿಗಳನ್ನು ಮೀರಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು "ಮೋಸ್ಟ್ ವಾಂಟೆಡ್ ಭಯೋತ್ಪಾದಕ" ಎಂದು ಪರಿಗಣಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ವಿಚಾರಣಾ ನ್ಯಾಯಾಲಯ ಜೂನ್ 20ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ, ಆ ಆದೇಶಕ್ಕೆ ತಡೆ ಕೋರಿ ಇಡಿ ಇಂದು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅದರಂತೆ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಜಾಮೀನಿಗೆ ತಾತ್ಕಾಲಿಕ ತಡೆ ನೀಡಿದೆ. ಈ ಹಿನ್ನೆಲೆ ಸುನೀತಾ ಕೇಜ್ರಿವಾಲ್ ಅವರು ತನ್ನ ಪತಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸುವ ಇಡಿ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.