ಹಾಸನ, ಜೂ.22(DaijiworldNews/AK):ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು ಕೇಸ್ ದಾಖಲಾಗಿದೆ.
ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377, 342 ಹಾಗೂ 506 ರಡಿ ಕೇಸ್ ದಾಖಲು ಮಾಡಲಾಗಿದೆ. ಶುಕ್ರವಾರ ಡಿಜಿ ಕಛೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದ. ಅಲ್ಲದೇ ಹಾಸನ ಎಸ್ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಇದೀಗ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಇನ್ನು ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ನೀಡಿದ್ದರು. ಈ ಹಿನ್ನಲೆ ಆತನ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.