ಬೆಂಗಳೂರು, ಜೂ.23(DaijiworldNews/AA): ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇಂದು ಹಾಸನದಲ್ಲಿ ಸೂರಜ್ ರೇವಣ್ಣರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ಬಳಿಕ ನ್ಯಾಯಾಧೀಶರು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಇನ್ನು ಸೂರಜ್ ರೇವಣ್ಣರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಆದರೆ ಈ ಪ್ರಕರಣ ಇನ್ನೂ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ನಾಳೆ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.