ನವದೆಹಲಿ, ಜೂ 26 (DaijiworldNews/ AK): ಜನಾಂಗೀಯ ನಿಂದನೆ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದ ಸ್ಯಾಮ್ ಪಿತ್ರೋಡಾ ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಈ ನಿರ್ಧಾರವನ್ನು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಸಮಯದಲ್ಲೇ ಪಿತ್ರಾರ್ಜಿತ ಆಸ್ತಿ ಮರು ಹಂಚಿಕೆ ಮತ್ತು ಈಗ ಭಾರತೀಯರ ಬಣ್ಣದ ಬಗ್ಗೆ ಜನಾಂಗೀಯ ನಿಂದನೆ ಬಗ್ಗೆ ಮಾತನಾಡಿ ಭಾರೀ ವಿವಾದವನ್ನು ಸೃಷ್ಟಿಸಿ ಕಾಂಗ್ರೆಸ್ ಪಕ್ಷಕ್ಕೆಮುಜುಗರ ತಂದಿದ್ದರು.
ಹೇಳಿಕೆ ಭಾರೀ ವಿವಾದವಾಗುತ್ತಿದ್ದಂತೆ ಸ್ಯಾಮ್ ಪಿತ್ರೋಡಾ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆಯನ್ನು ಅಂಗೀಕರಿಸಿದ್ದರು.