ಮೈಸೂರು, ಜು 03 (DaijiworldNews/MS): ರಾಜ್ಯದ 31 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು ಪ್ರಾದೇಶಿಕವಾರು ಪ್ರಗತಿ ಪರಿಶೀಲನಾ ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೧೪ ಲಕ್ಷ ಸರ್ಕಾರಿ ಸ್ವತ್ತುಗಳಿದ್ದು, ರಕ್ಷಿಸುವ ಸರ್ವೇ ಕಾರ್ಯ ಆರಂಭವಾಗಿದೆ ಎಂದು ಹೇಳಿದರು. ಸರ್ಕಾರಿ ಸ್ವತ್ತುಗಳ ಪಟ್ಟಿಯನ್ನು ಜುಲೈ ಅಂತ್ಯದೊಳಗೆ ಬಿಡುಗಡೆಗೊಳಿಸಿ ನಂತರ ವಶಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಉಪಮುಖ್ಯಮಂತ್ರಿ ವಿಚಾರ ಕುರಿತಂತೆ ನೀಡುತ್ತಿರುವ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾರಿಗಾದರೂ ಸ್ಥಾನಮಾನ ಬೇಕಿದ್ದರೆ ವರಿಷ್ಠರ ಬಳಿ ಕೇಳಬೇಕು ಎಂದು ತಿಳಿಸಿದರು. ಶಾಸಕರು ಜನರ ಸಮಸ್ಯೆ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.