ಬೆಂಗಳೂರು, ಜು.03(DaijiworldNews/AK): ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯಂಥ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ ಇದು ಶೋಭೆ ತರುವುದಿಲ್ಲ. ತುರ್ತು ಪರಿಸ್ಥಿತಿಯ ಕುರಿತು ಅವರು ನೀಡಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಸತ್ಯಕ್ಕೆ ದೂರವಾಗಿವೆ ಎಂದರು.
ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿಯ ಹೇರಿಕೆಗೆ ಕಾರಣವಾದ ಸಂದರ್ಭ ಸಾರ್ವಜನಿಕ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಲೇ ಇಲ್ಲ. ಹೀಗಾಗಿಯೇ ಈ ಬಗ್ಗೆ ತಪ್ಪು ಕಲ್ಪನೆಗಳು, ಬೇಕಾಬಿಟ್ಟಿಯಾದ ವಿಶ್ಲೇಷಣೆಗಳು ನಡೆಯುತ್ತಲೇ ಇವೆ. ಮುಖ್ಯವಾಗಿ, ತುರ್ತು ಪರಿಸ್ಥಿತಿ ಎಂಬುವುದು ಸಂವಿಧಾನೇ ತರ ವಿಷಯವಾಗಿರಲಿಲ್ಲ. ತುರ್ತು
ಪರಿಸ್ಥಿತಿಯನ್ನು ಹೇರುವುದು ಸಂವಿಧಾನವೇ ಕೊಟ್ಟ ನಿಬಂಧನೆ ಅಥವಾ ಅವಕಾಶವಾಗಿದೆ ಎಂದರು.
ಸಂಸತ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಅವರನ್ನು ಮೋದಿ ಅವಹೇಳನ ಮಾಡಿದ್ದಾರೆ. ರಾಹುಲ್ ಅವರನ್ನು ಬಾಲಬುದ್ಧಿ, ಬಚ್ಚಾ ಎಂದಿದ್ದಾರೆ. ಈ ಮೂಲಕ ಮಕ್ಕಳನ್ನ ಅವಹೇಳನ ಮಾಡಿದ್ದಾರೆ ಎಂದರು. ಚೀ ನಾ ಅತಿಕ್ರಮಣದ ಬಗ್ಗೆ ಮಾತನ್ನಾಡಿಲ್ಲ. ಮಣಿಪುರ ಘಟನೆ ಕುರಿತು ಏನೂ ಮಾತನ್ನಾಡಲಿಲ್ಲ.ಯಾವುದೇ ಪ್ರಧಾನಿ ಇಷ್ಟೊಂದು ಕೀಳುಮಟ್ಟದಲ್ಲಿ ಭಾಷಣ ಮಾಡಿದ್ದನ್ನು ನೋಡಿಲ್ಲ. ಅವರು ಸಂವಿಧಾನಕ್ಕೆ ವಿರುದ್ಧವಾಗಿ ಭಾಷಣ ಮಾಡಿದ್ದಾರೆ ಎಂದು ದೂರಿದರು.
ಸ್ವಾಮಿ ವಿವೇಕಾನಂದರ ಬಗ್ಗೆ ಭಾಷಣದಲ್ಲಿ ಮೋ ದಿ ಪ್ರಸ್ತಾಪಿಸಿದ್ದಾರೆ. ವಿವೇ ಕಾನಂ ದರ ಹೆಸರು ಹೇ ಳಲು ಅವರಿಗೆ ನೈತಿಕತೆ ಇಲ್ಲ. ಅವರಮಾತುಗಳನ್ನು ನೋ ಡಿದರೆ
ಬುದ್ಧಿಭ್ರಮಣೆ ಆದಂತೆ ಕಾಣುತ್ತದೆ' ಎಂದರು.