ನವದೆಹಲಿ, ಜು. 07(DaijiworldNews/AA): ಭಾರತದ ಬಗ್ಗೆ ವಿಶ್ವದಾದ್ಯಂತ ಕಂಡು ಬರುತ್ತಿರುವ ಆಶಾವಾದ ಮತ್ತು ನಂಬಿಕೆಯು ದೇಶದ ಶಕ್ತಿಯ ಪತ್ರಿರೂಪವಾಗಿದೆ. ದೇಶದ ಜನರು ವಿವಿಧ ಕ್ಷೇತ್ರಗಳಲ್ಲಿ ಭಾಗವಹಿಸುವಿಕೆಯ ಮೂಲಕ ದೇಶದ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿಯೂ ಭಾರತೀಯರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಅವರ ಉತ್ಸಾಹವೇ ದೇಶದ ಅತಿ ದೊಡ್ಡ ಶಕ್ತಿಯಾಗಿದೆ. ಬಾಹ್ಯಾಕಾಶ ವಿಜ್ಞಾನ, ರಕ್ಷಣಾ ಕ್ಷೇತ್ರ ಮತ್ತು ವ್ಯಾಪಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮ ಕೆಲಸಗಳು ಸಾಗಿವೆ ಎಂದು ಮೋದಿ ಹೇಳಿದ್ದಾರೆ.
ಜಿಐಟಿಒ ಅಂತಹ ಸಂಸ್ಥೆಗಳು ಸಹ ಕಳೆದ ದಶಕದಿಂದಲೂ ಸೇವೆ ಒದಗಿಸುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿವೆ. ತಂತ್ರಜ್ಞಾನ ಕ್ಷೇತ್ರ ಸೇರಿದಂತೆ 2024ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಗುರಿಯನ್ನು ಹೊಂದಿದೆ ಎಂದರು.