ಬೆಂಗಳೂರು, ಜು 11(DaijiworldNews/ AK): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಕೋವಿಡ್ ಸಂದರ್ಭದಲ್ಲಿ ವಾರ್ ರೂಮ್ ತೆರೆದ ಮಾದರಿಯಲ್ಲೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡೆಂಗ್ಯೂ ವಾರ್ ರೂಮ್ತೆರೆಯಲು ಸೂಚನೆ ನೀಡಿದೆ. ಇದರೊಂದಿಗೆ ಇನ್ನೂ ಅನೇಕ ಕ್ರಮಗಳನ್ನು ಕೈಗೊಂಡಿದೆ.
* ಒಂದೇ ಸ್ಥಳದಲ್ಲಿ ಎರಡು ಅಥವಾ ಮೂರು ಡೆಂಗ್ಯೂ ಕೇಸ್ ಕಂಡುಬಂದರೆ ಹಾಟ್ ಸ್ಪಾಟ್ ಅಂತ ಪರಿಗಣನೆ
* ಹಾಟ್ಸ್ಪಾಟ್ಗಳಲ್ಲಿ ಲಾರ್ವಾ ನಾಶ ಚಟುವಟಿಕೆಯನ್ನು ತೀವ್ರಗೊಳಿಸುವುದು, ಒಳಾಂಗಣ/ಹೊರಾಂಗಣದಲ್ಲಿ ಲಾರ್ವಾನಾಶಕಗಳ ಬಳಕೆ ಹಾಗೂ ಒಳಾಂಗಣದಲ್ಲಿ ಡೆಂಗ್ಯೂ ನಾಶಕವನ್ನು ಸಿಂಪಡಿಸಿ ಮನೆಯ ಸದಸ್ಯರನ್ನ 30 ನಿಮಿಷಗಳ ಕಾಲ ಮನೆಯಿಂದ ಹೊರಗಡೆ ಇರುವಂತೆ ಸೂಚಿಸುವುದು
* ಡೆಂಗ್ಯೂ ಪಾಸಿಟಿವ್ ಆದ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ಗಳನ್ನು ತುರ್ತಾಗಿ ಸಕ್ರೀಯಗೊಳಿಸಬೇಕು.
* ಹಾಟ್ಸ್ಪಾಟ್ ಪ್ರದೇಶಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಣೆ ಖಚಿತಪಡಿಸಿಕೊಳ್ಳುವುದು ಹಾಗೂ ಕೈ, ಕಾಲು – ಕುತ್ತಿಗೆಯ ಭಾಗದಲ್ಲಿ ಹಚ್ಚಿಕೊಳ್ಳುವಂತೆ ತಿಳಿಸುವುದು.
*ಡೆಂಗ್ಯೂ ಪಾಸಿಟಿವ್ ಆದ ವ್ಯಕ್ತಿಯನ್ನ ಜ್ವರ ಕಾಣಿಸಿಕೊಂಡ ದಿನದಿಂದ 14 ದಿನಗಳ ಕಾಲ ಅನುಪಾಲನೆ ಮಾಡುವುದು
* ಬೇವಿನ ಎಣ್ಣೆ ಇಲ್ಲದೇ ಹೋದರೆ ಸಿಟ್ರೋನೆಲ್ ಆಯಿಲ್, ಲೆಮನ್ ಗ್ರೇಸ್ ಆಯಿಲ್ ಅಥವಾ ಡೀಟ್ ಆಧಾರಿತ ಕ್ರೀಂ ಆಯಿಲ್ಗಳನ್ನ ವಿತರಣೆ ಮಾಡಬೇಕು
* ಡೆಂಗ್ಯೂ ಪ್ರಕರಣಗಳ ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಫತ್ರೆಗಳಲ್ಲಿ 5 ರಿಂದ 10 ಹಾಸಿಗೆಗಳನ್ನು ಮೀಸಲಿಡಬೇಕು.
* ಡೆಂಗ್ಯೂ ಜ್ವರ ಪ್ರಕರಣಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣಾ ಸೌಲಭ್ಯವನ್ನು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ಆರೋಗ್ಯ ಸಂಸ್ಥೆಗಳು ಎಲ್ಲರಿಗೂ ಸಂಪೂರ್ಣ ಉಚಿತವಾಗಿ ನೀಡಬೇಕು.
* ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಸ್ಟಿಂಗ್ ಕಿಟ್, ಅಗತ್ಯ ಪ್ರಮಾಣದ ಔಷಧಿ ಹಾಗೂ IV Fluids ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಬೇಕು. ಜಿಲ್ಲಾವಾರು ಸರ್ಕಾರಿ ಹಾಗೂ ಖಾಸಗಿ ರಕ್ತನಿಧಿಗಳಿಂದ ಪ್ಲೇಟ್ಲೆಟ್, ಪ್ಲಾಸ್ಮಾ ಹಾಗೂ ಇತರ ಕಾಂಪೊನೆಂಟ್ಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡಬೇಕು.
*ಕಡ್ಡಾಯವಾಗಿ ಡೆಂಗ್ಯೂ ಜ್ವರ ನಿರ್ವಹಣೆ ಸಂಬಂಧ ಶಿಷ್ಟಾಚಾರ ಪಾಲನೆ ಮಾಡಬೇಕು.