ಬೆಂಗಳೂರು,ಮೇ 16(DaijiworldNews/AZM) :ಸಿಎಂ ಸ್ಥಾನಕ್ಕೆ ಎಚ್.ಡಿ. ರೇವಣ್ಣನವರೂ ಕೂಡಾ ಅರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಟ್ವೀಟ್ ಮಾಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದು ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.