ಭುವನೇಶ್ವರ್,ಮೇ16(DaijiworldNews/AZM):ಫನಿ ಚಂಡಮಾರುತದಿಂದ ರಾಜ್ಯಕ್ಕೆ ಸುಮಾರು 12 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಒಡಿಶಾ ಸರಕಾರ ಕೇಂದ್ರಕ್ಕೆ ತಾತ್ಕಾಲಿಕ ವರದಿ ಸಲ್ಲಿಸಿದೆ.
ವರದಿಯಂತೆ ಫನಿ ಚಂಡಮಾರುತದಿಂದ 64 ಜನ ಮೃತಪಟ್ಟಿದ್ದಾರೆ, ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಮನೆ ಮಠ ಕಳೆದುಕೊಂಡು ಬೀದಿ ಪಾಲಾಗಿದ್ದು, ಒಟ್ಟು 12 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಒಡಿಶಾ ಸರ್ಕಾರ ಕೇಂದ್ರಕ್ಕೆ ನೀಡಿರುವ ವರದಿಯಲ್ಲಿ ಹೇಳಲಾಗುತ್ತಿದೆ.
ಫನಿ ಚಂಡಮಾರುತದಿಂದ ಉಂಟಾದ ನಷ್ಟದ ಕುರಿತು ಅಂದಾಜಿಸಲು ಬುಧವಾರ ಕೇಂದ್ರ ತಂಡ ಬುಧವಾರ ಒಡಿಶಾಗೆ ಭೇಟಿ ನೀಡಿತ್ತು. ಈ ವೇಳೆ ರಾಜ್ಯ ಸರ್ಕಾರ ಕೇಂದ್ರದ ತಂಡಕ್ಕೆ 12 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಪ್ರಾಥಮಿಕ ವರದಿ ಸಲ್ಲಿಸಿದೆ. ಅಲ್ಲದೆ ಇದು ಅಂದಾಜಿನ ನಷ್ಟದ ಪ್ರಮಾಣವಾಗಿದ್ದು, ನಷ್ಟದ ವಾಸ್ತವಿಕ ಪ್ರಮಾಣ ತಿಳಿಯಲು ಅಧಿಕಾರಿಗಳು ಶೀಘ್ರದಲ್ಲಿ ಮನೆ ಮನೆಗೂ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷೆಯಲ್ಲಿ ನಷ್ಟದ ಪ್ರಮಾಣ ಅಧಿಕವಾಗುವ ಸಾಧ್ಯತೆ ಇದೆ. ಸಮೀಕ್ಷೆ ಪೂರ್ಣಗೊಂಡ ಬಳಿಕ ವಿವರವಾದ ವರದಿಯನ್ನು ಸಿದ್ದಪಡಿಸಲಾಗುವುದು ಎಂದು ಒಡಿಶಾ ರಾಜ್ಯ ಸರ್ಕಾರದ ವಿಶೇಷ ಪರಿಹಾರ ಆಯುಕ್ತ ಬಿ.ಪಿ. ಸೇಠಿ ತಿಳಿಸಿದ್ದಾರೆ.