ವಿಜಯಪುರ, ಮೇ 17(Daijiworld News/MSP): :ಜೆಡಿಎಸ್ನ ಮಾಜಿ ಜಿಲ್ಲಾಧ್ಯಕ್ಷೆ, ವಿಜಯಪುರದ ಹಾಲಿ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಅವರನ್ನು ಹತ್ಯೆಮಾಡಲಾಗಿದೆ.
ಅವರ ಮೃತದೇಹ ವಿಜಯಪುರ ಜಿಲ್ಲೆಯ ಕೋಲ್ಹಾರ ಸನಿಹದ ಕೃಷ್ಣಾ ನದಿಯ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದೆ.
ಗುರುವಾರ ರಾತ್ರಿ ಮಹಾರಾಷ್ಟ್ರದ ಎಂಐಎಂ ಮುಖಂಡನೊಬ್ಬನೊಂದಿಗೆ ರೇಷ್ಮಾ ಅವರು ಕಾರಿನಲ್ಲಿ ತೆರಳಿದ್ದರು ಎಂದು ಹೇಳಲಾಗುತ್ತಿದ್ದು ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೋಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ಹಿಂದೆ ರೇಷ್ಮಾ ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದರು. ಅವರು 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯಪುರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.