ನವದೆಹಲಿ, ಜು 23 (DaijiworldNews/MS): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸತತ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಅನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆ 7ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದು, 2047ರ ವೇಳೆಗೆ ‘ವಿಕಸಿತ ಭಾರತ’ ಸಾಧನೆಗೆ ಅಡಿಪಾಯ ಹಾಕಲಿದ್ದಾರೆ.
ಮಧ್ಯಮ ವರ್ಗಕ್ಕೆ ತೆರಿಗೆ ರಿಲೀಫ್, ಉದ್ಯೋಗ ಸೃಷ್ಟಿ, ಕೃಷಿ, ಆರೋಗ್ಯ, ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ, ಮೂಲಸೌಕರ್ಯ ಹಾಗೂ ಆರೋಗ್ಯಕ್ಕೆ ಒತ್ತು ಸೇರಿದಂತೆ ಹತ್ತು ಹಲವು ಭಾರಿ ನಿರೀಕ್ಷೆಗಳು ಗರಿಗೆದರಿವೆ.
"ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ದೃಢಪಡಿಸಿದ್ದು ಮತ್ತು ಐತಿಹಾಸಿಕ ಮೂರನೇ ಅವಧಿಗೆ ಅದನ್ನು ಮರು ಆಯ್ಕೆ ಮಾಡಿದ್ದಾರೆ"
ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ಭಾರತದ ಜನರು ತಮ್ಮ ನಂಬಿಕೆಯನ್ನು ಮರುಸ್ಥಾಪಿಸಿದ್ದಾರೆ. ಅವರ ಬೆಂಬಲ, ನಂಬಿಕೆ ಮತ್ತು ನಮ್ಮ ನೀತಿಯಲ್ಲಿ ನಂಬಿಕೆಗೆ ನಾವು ಕೃತಜ್ಞರಾಗಿರುತ್ತೇವೆ" ಎಂದು ಮಾತು ಆರಂಭಿಸಿದ್ದಾರೆ.