ಬೆಂಗಳೂರು, ಜು 25(DaijiworldNews/ AK): ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.
ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ ಆಗಿರುವ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನ ನೇಮಕ ಮಾಡಲಾಗಿದೆ.
ಆಗಸ್ಟ್ 1 ರಿಂದ ಶಾಲಿನಿ ರಜನೀಶ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 1989ರ ಬ್ಯಾಚ್ನ ಐಎಎಸ್ ಅಧಿಕಾರಿ ಆಗಿರುವ ಶಾಲಿನಿ ಅವರ ಸೇವಾವಧಿ 2027ರ ಜೂನ್ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ