ಮೈಸೂರು, ಮೇ17(Daijiworld News/SS): ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆ.ಎಸ್.ಭಗವಾನ್ ಕುವೆಂಪುನಗರದ ತಮ್ಮ ನಿವಾಸದ ಬಳಿ ವಾಯುವಿಹಾರ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಸಾಹಿತಿ ಪ್ರೊ.ಕೆ.ಎಸ್.ಭಗವಾನ್'ಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ತಾತ್ಕಾಲಿಕ ಪೇಸ್ ಮೇಕರ್ ಸಾಧನವನ್ನು ಅಳವಡಿಸಿದ್ದಾರೆ ಎಂದು ತಿಳಿದುಬಂದಿದೆ.
ಚಿಕಿತ್ಸೆಗೆ ಸ್ಪಂದಿಸುವ ಹಂತದಲ್ಲಿ ಭಗವಾನ್ ಅವರನ್ನು ಕರೆತಂದ ಕಾರಣದಿಂದ ಬದುಕಿಸಲು ಸಾಧ್ಯವಾಯಿತು. ಹೃದಯ ಬಡಿತ ತೀರಾ ಕ್ಷೀಣವಾಗಿತ್ತು. ಅವರ ಆರೋಗ್ಯವನ್ನು ಸ್ಥಿರಗೊಳಿಸಿ ಶಸ್ತ್ರಚಿಕಿತ್ಸೆ ನಡೆಸಿದೆವು. ಅವರನ್ನು ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.