ನವದೆಹಲಿ,ಮೇ18(DaijiworldNews/AZM): ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನಾಳೆ (ಮೇ.19)ರಂದು ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ದತೆ ನಡೆಸಿದೆ.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯಪ್ರದೇಶ, ಪಂಜಾಬ್ ಸೇರಿದಂತೆ 59 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ.
ಕೊನೆಯ ಹಂತದ ಮತದಾನ ಆಗಿರುವುದರಿಂದ ಶುಕ್ರವಾರ ಸಂಜೆಯೇ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಈ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಜನರಿಗೆ ಧನ್ಯವಾದ ಹೇಳಿದರೆ, ಅತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಕೂಡ ಜನರಿಗೆ ವಂದನೆ ಅರ್ಪಿಸಿದ್ದಾರೆ.
ದೇಶದ ವಿವಿಧ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಮೇ ೨೩ರಂದು ಹೊರಬೀಳಲಿದೆ.