ಬೆಂಗಳೂರು,ಮೇ18(DaijiworldNews/AZM):ಸಮವಸ್ತ್ರದ ಹೆಸರಿನಲ್ಲಿ ಕೆಲವು ಕಾಲೇಜುಗಳಲ್ಲಿ ಭಾರಿ ಮೊತ್ತದ ಹಣ ವಸೂಲಿ ಮಾಡುತ್ತಿರುವ ದೂರುಗಳು ಬಂದ ಹಿನ್ನಲೆ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಬಾರದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ಅನೇಕ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿಗಳು ಪೋಷಕರಿಗೆ ಹೊರೆಯಾಗಿ ಪರಿಣಮಿಸಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ.
ಅಲ್ಲದೇ, ಸಮವಸ್ತ್ರ ಕಡ್ಡಾಯಗೊಳಿಸುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಅನೇಕ ಕಾಲೇಜುಗಳಲ್ಲಿ ಹಿಂದಿನಿಂದಲೂ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಈಗ ಪದವಿ ಪೂರ್ವ ಶಿಕ್ಷಣ ಇಲಾಖೆ ಸಮವಸ್ತ್ರ ಕಡ್ಡಾಯವಲ್ಲ ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.