ಕಾಶ್ಮೀರ,ಮೇ18(DaijiworldNews/AZM):ಭದ್ರತಾ ಪಡೆಗಳು ಇಂದು ಪುಲ್ವಾಮದಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ.
ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆ ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿತ್ತು. ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆಯಿತು.ಭದ್ರತಾ ಪಡೆಗಳು ಈವರೆಗೂ ಏಳು ಉಗ್ರರನ್ನು ಹೊಡೆದುರುಳಿಸಿವೆ. ಕಳೆದ ಮೂರು ದಿನಗಳಿಂದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ದಾಳಿ– ಪ್ರತಿದಾಳಿಗಳು ನಡೆಯುತ್ತಿವೆ. ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದು,ಈ ಹಿನ್ನಲೆ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಶುಕ್ರವಾರ ಬಂದ್ಗೆ ಕರೆ ನೀಡಿದ್ದರು.