ಬೆಂಗಳೂರು, ಆ 1(DaijiworldNews/ AK): ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಪ್ರಾಸಿಕ್ಯೂಷನ್ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದರೆ ಹೈಕೋ ರ್ಟ್ ಮೆಟ್ಟಿಲೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಮುಖ್ಯಮಂತ್ರಿ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಚಿವರ ಜೊತೆಗಿನ ಉಪಾಹಾರ ಕೂಟದಲ್ಲಿ ಈ ವಿಚಾರ ಚರ್ಚೆಯಾಗಿದೆ. ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆಯೂ ಸಮಾಲೋಚನೆ ನಡೆದಿದೆ.ಈಗಾಗಲೇ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಮನವಿ ಮಾಡಲು ಸಂ ಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆಯೂ ಚರ್ಚೆ ಯಾಗಿದೆ.
ಸಚಿವ ಸಂಪುಟ ಸಭೆಯಲ್ಲಿಯೂ ಈ ವಿಷಯ ಚರ್ಚೆ ಯಾಗಲಿದೆ. ರಾಜ್ಯಪಾಲರ ನಡೆ ವಿರೋಧಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಕೂಡ ಉಪಾಹಾರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗೆ ಸಚಿವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.