ಮುಂಬಯಿ, ಆ.02DaijiworldNews/AA): ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ನಲ್ಲಿ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್ ಕುಸಾಲೆ ಅವರು ಕಂಚಿನ ಪದಕ ಗೆದ್ದಿದ್ದರು. ಇವರ ಈ ಸಾಧನೆಗೆ ಮಹಾರಾಷ್ಟ್ರದ ಏಕನಾಥ ಶಿಂಧೆ ಸರ್ಕಾರ 1 ಕೋಟಿ ಬಹುಮಾನ ಪ್ರಕಟಿಸಿದೆ.
ಸ್ವಪ್ನಿಲ್ ಕುಸಾಲೆ ಅವರು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರು. ಅವರು 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾಗಿದ್ದರು.
ಸ್ವಪ್ನಿಲ್ ಅವರು ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ ರೈಫಲ್ ಶೂಟರ್ ಸ್ಪರ್ಧೆಯಲ್ಲಿ ಪದಕ ಗೆದ್ದ 3ನೇ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸ್ವಪ್ನಿಲ್ ಅವರು ಫೈನಲ್ ಸ್ಪರ್ಧೆಯಲ್ಲಿ ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಇನ್ನು ಕಂಚಿನ ಪದಕ ಗೆದ್ದ ಸ್ವಪ್ನಿಲ್ ಅವರಿಗೆ ಮಹಾರಾಷ್ಟç ಸರ್ಕಾರ ನೀಡುತ್ತಿರುವ ಬಹುಮಾನದ ಹೊರತಾಗಿ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ದೊರೆಯಲಿದೆ.