ಬೆಂಗಳೂರು,ಮೇ 18(Daijiworld News/MSP): ಕೇಂದ್ರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಮಾಡುವ ಮಹತ್ತರ ಘಟ್ಟದಲ್ಲಿ ನಾವಿರುವಾಗ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ನಾಯಕರು ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಸಿಎಂ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ " ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು ಇಂತಹ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು
" ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ , ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ " ಎಂದು ಅವರು ಟ್ವೀಟ್ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ" ಎಂಬ ಕಾಂಗ್ರೆಸಿಗರ ಹೇಳಿಕೆ ಇದಕ್ಕೆ ತಿರುಗೇಟು ನೀಡಲು ಜೆಡಿಎಸ್ ಪ್ರತಿಕ್ರಿಯೆ, ಮತ್ತು "ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಚುನಾವಣೆಗೆ ಹೋಗುವುದೇ ಸೂಕ್ತ", ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆ ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಭಿನ್ನಮತ ನಿಲ್ಲಿಸೋಣ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚಿಸೋಣ ಎಂದು ಉಭಯ ಪಕ್ಷಗಳ ಮುಖಂಡರಿಗೆ ಸಿಎಂ ಮನವಿ ಮಾಡಿದ್ದಾರೆ.