ಬೆಂಗಳೂರು, ಮೇ 18 (Daijiworld News/SM): ಲೋಕಸಭೆಯ ಕಡೆಯ ಹಂತದ ಮತದಾನ ಮಾತ್ರ ಉಳಿದಿದ್ದು, ಎಲ್ಲರ ದೃಷ್ಟಿ ಮೇ 23ರಂದು ಹೊರಬೀಳಲಿರುವ ಫಲಿತಾಂಶದ ಮೇಲೆ ನೆಟ್ಟಿದ್ದು, ಮಹಾಘಟ ಬಂಧನದಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಲೆಂದು ದೇವೇ ಗೌಡ ಇಂಗಿತ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ತಮ್ಮ ಬೆಂಬಲ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷಕ್ಕೆ ನೀಡಲಿದ್ದೇವೆ. ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಹುದ್ದೆಗೆ ಶಿಫಾರಸು ಮಾಡುವುದಾಗಿ ದೇವೇಗೌಡ ತಿಳಿಸಿದ್ದಾರೆ.
ಮತ್ತೊಂದೆಡೆ, ಆಂಧ್ರ ಪ್ರದೇಶದ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರು, ರಾಹುಲ್ ಗಾಂಧಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವಾರು ನಾಯಕರನ್ನು ಭೇಟಿ ಮಾಡುತ್ತಿದ್ದು, ಒಮ್ಮತದ ಅಭ್ಯರ್ಥಿಯ ಹುಡುಕಾಟಕ್ಕೆ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ.