ನವದೆಹಲಿ,ಮೇ19(DaijiworldNews/AZM): ಲೋಕಸಭಾ ಚುನಾವಣಾ ಫಲಿತಾಂಶ ಒಳ್ಳೆಯ ರೀತಿ ಬರಲಿದ್ದು, ಸಮ್ಮಿಶ್ರ ಸರ್ಕಾರ ತನ್ನ ಅಧಿಕಾರವಧಿಯನ್ನು ಪೂರ್ಣಗೊಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ರಾಹುಲ್ ಗಾಂಧಿಯವರ ಜೊತೆ ಸಭೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದ್ದೇವೆ.
ಸಮ್ಮಿಶ್ರ ಸರ್ಕಾರ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದೇಬರುತ್ತವೆ, ಎರಡೂ ಪಕ್ಷದ ನಾಯಕರು ಒಂದೆಡೆ ಕುಳಿತು ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೇವೆ. ಕುಮಾರಸ್ವಾಮಿಯವರು ಅಧಿಕಾರವನ್ನು ಪೂರ್ಣಗೊಳಿಸುವ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.
ಕೇಂದ್ರದಲ್ಲಿ ಹೊಸ ಸರ್ಕಾರ ಬರುವ ಲಕ್ಷಣಗಳಿವೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಕಳೆದುಕೊಂಡು ಮನೆಗೆ ಹೋಗಲಿದ್ದಾರೆ. ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.