ಬೆಂಗಳೂರು,ಮೇ 20(DaijiworldNews/AZM):ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ತಿಳಿದು ಬಂದ ಬೆನ್ನಲೇ ಮತಯಂತ್ರಗಳು ಕುರಿತು ಸಿಎಂ ಕುಮಾರಸ್ವಾಮಿಯವರು ಸಂಶಯ ವ್ಯಕ್ತಪಡಿಸಿದ್ದಾರೆ.
ಮತಯಂತ್ರಗಳ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಧ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿಯವರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ ಎಂಬುದನ್ನು ಬಿಂಬಿಸಲು ಈ ಸಮೀಕ್ಷೆ ಮಾಡಲಾಗಿದೆ. ಮೇ 23ರ ಫಲಿತಾಂಶದ ನಂತರ ನೈಜ ಸ್ಥಿತಿ ಏನೆಂಬುದು ತಿಳಿಯಲಿದೆ ಎಂದು ಸಿಎಂ ತಿಳಿಸಿದ್ದಾರೆ.