ಬೆಂಗಳೂರು,ಮೇ 20(DaijiworldNews/AZM):ಲೋಕಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಇದೀಗ ಮತ ಎಣಿಕೆಗೆ ಎಲ್ಲೆಡೆ ಭರದ ಸಿದ್ದತೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮದವರನ್ನು ಹೊರತುಪಡಿಸಿ ಅಭ್ಯರ್ಥಿ, ಏಜೆಂಟ್ಗಳಿಗೂ ಮೊಬೈಲ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ,ಹಾಗೂ ಚುನಾವಣಾಯುಕ್ತ ಮಂಜುನಾಥ್ ಪ್ರಸಾದ್ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಇಬ್ಬರು ವೀಕ್ಷಕರನ್ನು ಮತ ಎಣಿಕೆ ಸಂದರ್ಭದಲ್ಲಿ ನೇಮಿಸಲಾಗುವುದು. ಅಭ್ಯರ್ಥಿಗಳು ಹಾಗೂ ಏಜೆಂಟರು ಸೇರಿದಂತೆ ಯಾರಿಗೂ ಮೊಬೈಲ್ ಬಳಕೆಗೆ ಅವಕಾಶವಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ಗಳನ್ನಿಡಲು ವ್ಯವಸ್ಥೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲಿಗೆ ಅಂಚೆ ಮತ ಪತ್ರ ಮತ್ತು ಇಟಿಪಿಬಿಎಸ್ಗಳ ಎಣಿಕೆ ಪ್ರಕ್ರಿಯೆಯು ಸಂಬಂಧಪಟ್ಟ ಚುನಾವಣಾಧಿಕಾರಿಗಳ ಕೊಠಡಿಯಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದರು