ಬೆಂಗಳೂರು, ಆ.05(DaijiworldNews/AK): ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್ ಅವರ ಹೆಸರಿಲ್ಲ.
ಸುಮಾರು 3,072 ಪುಟಗಳ ಚಾರ್ಜ್ ಶೀಟ್ ಇದಾಗಿದ್ದು ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ತನಿಖೆಯ ವೇಳೆ ಸುಮಾರು 45 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ ಎಂದು ಎಸ್ಐಟಿ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ.