ಬೆಂಗಳೂರು, ಮೇ21(Daijiworld News/SS): ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತಾಧಿಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಬಿ.ಬಿ.ಎಂ.ಪಿ. ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 75 ಸಾವಿರ ಲೀಟರ್ ಕುಡಿಯುವ ನೀರಿನ ಕ್ಯಾನ್, ಬಾಟಲ್ಗಳನ್ನು ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತಾಧಿಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಬಿ.ಬಿ.ಎಂ.ಪಿ.ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 75 ಸಾವಿರ ಲೀಟರ್ ಕುಡಿಯುವ ನೀರಿನ ಕ್ಯಾನ್ ಮತ್ತು ಬಾಟಲ್’ಗಳನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಲಾಗಿದೆ.
ಈ ವೇಳೆ ಮಾತನಾಡಿದ ಮಹಾಪೌರರಾದ ಶ್ರೀಮತಿ ಗಂಗಾಬಿಕೆ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವವಿರುವುದರಿಂದ ಬಿ.ಬಿ.ಎಂ.ಪಿ. ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 75 ಸಾವಿರ ಲೀಟರ್ ನೀರು ತಲುಪಿಸಲಾಗುತ್ತಿದೆ ಎಂದು ಹೇಳಿದರು.
ಉತ್ತಮವಾದ ಕೆಲಸ ಮತ್ತು ಬೇಸಿಗೆ ಬಿಸಿಲು ಹೆಚ್ಚಾಗಿರುವ ಕಾರಣ ಜನರಿಗೆ ನೀರು ಕುಡಿಯುಲು ಹೆಚ್ಚು ಬೇಕಾಗುತ್ತದೆ. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಮತ್ತು ಅಡುಗೆ ಮನೆಗೆ ಶುದ್ದ ಕುಡಿಯುವ ನೀರು ಸಿಗಲಿ ಎಂದು ಬಿ.ಬಿ.ಎಂ.ಪಿ. ಕ್ಷೇಮಾಭಿವೃದ್ದಿ ಸಂಘದಿಂದ ಶ್ರೀ ಕ್ಷೇತ್ರಕ್ಕೆ ನೀರು ತಲುಪಿಲಾಗುತ್ತಿದೆ ಎಂದು ತಿಳಿಸಿದರು.