ನವದೆಹಲಿ,ಮೇ22(DaijiworldNews/AZM): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಬಹಳಷ್ಟು ಶ್ರಮಪಟ್ಟು ಪ್ರಚಾರ ನಡೆಸಿದ್ದಾರೆ ಈ ಹಿನ್ನಲೆ ಕಾಂಗ್ರೆಸ್ ಪ್ರಮುಖ ವಿರೋಧಪಕ್ಷವಾಗಿ ಹೊರಹೊಮ್ಮಲಿದೆ ಎಂದು ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ತಿಳಿಸಿದೆ.

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾರನ್ನು ಶಿವಸೇನೆ ಹೊಗಳಿರುವುದು ರಾಜಕೀಯ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ. ಚುನಾವಣೋತ್ತರ ಸಮೀಕ್ಷೆಗಳು ಹೇಳಿದಂತೆ ದೇಶದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಬಹಳ ಶ್ರಮದಿಂದ ಈ ಬಾರಿ ಕ್ಯಾಂಪೇನ್ ಮಾಡಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಲಿದೆ ಅಂತಾ ಶಿವಸೇನೆ ಹೇಳಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ವಿರೋಧ ಪಕ್ಷದಲ್ಲಿ ಕೂರಲೂ ಅವಶ್ಯವಾದ ಸ್ಥಾನ ಸಿಕ್ಕಿರಲಿಲ್ಲ. ಆದ್ರೆ ಈ ಬಾರಿ ರಾಹುಲ್, ಪ್ರಿಯಾಂಕಾ ಬಹಳಷ್ಟು ಕಷ್ಟಪಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ಗೆ ಲೋಕಸಭೆಯಲ್ಲಿ ವಿರೋಧಪಕ್ಷದ ಸ್ಥಾನ ಸಿಗಲಿದೆ ಎಂದು ಶಿವಸೇನೆ ತನ್ನ ಪತ್ರಿಕೆಯಲ್ಲಿ ಹೇಳಿಕೊಂಡಿದೆ. .