ಹಿಮಾಚಲಪ್ರದೇಶ,ಮೇ22(DaijiworldNews/AZM):ಕೊನೆಯ ಹಂತದ ಲೋಕಸಭಾ ಚುನಾವಣೆ ನಡೆದ ಬಳಿಕ, ಹಿಮಾಚಲಪ್ರದೇಶದಲ್ಲಿ ಅಧಿಕಾರಿಗಳು ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ವೋಟ್ ಗಳನ್ನು ಡಿಲೀಟ್ ಮಾಡಿದ್ದಾರೆ.

ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡಲು ಮತಗಟ್ಟೆ ಸಿಬ್ಬಂದಿ ಮರೆತಿದ್ದರು. ಪೋಲಿಂಗ್ ಏಜೆಂಟ್ ಗಳ ಉಪಸ್ಥಿತಿಯಲ್ಲಿ ಡಮ್ಮಿ ವೋಟ್ ಡಿಲೀಟ್ ಮಾಡಲು ಮುಂದಾಗಿದ್ದು, ಈ ವೇಳೆ ಅಸಲಿ ವೋಟ್ ಗಳನ್ನು ಕೂಡ ಡಿಲೀಟ್ ಮಾಡಲಾಗಿದೆ." ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ.