ಮೈಸೂರು, ಆ.08(DaijiworldNews/AK): ಪಾಪ ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಅವರು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಮುಡಾದಲ್ಲಿ ನಡೆದ ಅಕ್ರಮ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಮುಂಡೇಶ್ವರಿ ದರ್ಶನ ಪಡೆದರು.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ , ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಸಿದ್ದರಾಮಯ್ಯ ಈಗ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಕಿಡಿಕಾರಿದ್ದಾರೆ.
ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಪೊಕ್ಸೋ ಕೇಸ್ನಲ್ಲಿ ನಾಳೆ ಕೋರ್ಟ್ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ ಎಂದರು.