ಶ್ರೀನಗರ, ಆ.10(DaijiworldNews/AA): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಮೂವರು ಯೋಧರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಅಹ್ಲಾನ್ ಗಡೋಲ್ನಲ್ಲಿ ಎನ್ಕೌಂಟರ್ ಆರಂಭವಾಗಿದೆ. ಭಯೋತ್ಪಾದಕರು ಸೈನಿಕರ ಮೇಲೆ ಮನಬಂದಂತೆ ಗುಮಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ವಿದೇಶಿಯರು ಎಂದು ಶಂಕಿಸಲಾದ ಭಯೋತ್ಪಾದರನ್ನು ಮಟ್ಟಹಾಕಲು ಸೇನೆಯ ವಿಶೇಷ ಪಡೆಗಳು, ಪ್ಯಾರಾಟ್ರೂಪರ್ಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕೋಕರ್ನಾಗ್ನಲ್ಲಿ ನಡೆದ ಎನ್ಕೌಂಟರ್ ಬಿಟ್ಟರೆ, ಇದು ಎರಡನೇ ಪ್ರಮುಖ ಗುಂಡಿನ ದಾಳಿಯಾಗಿದೆ.
ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣದ ವೈದ್ಯಕೀಯ ನೆರವು ಒದಗಿಸಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.