ಬೆಂಗಳೂರು, ಆ.12(DaijiworldNews/AA): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆದಿದೆ. ಆದರೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಕೆ ಸೋಮಶೇಖರ್ ಮತ್ತು ನ್ಯಾ. ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠವು ಆದೇಶ ಕಾಯ್ದಿರಿಸಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ.ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದೆ. ಇನ್ನು ಹೈಕೋರ್ಟ್ ತೀರ್ಪು ಕಾಯ್ದಿರಿಸುವ ಮೂಲಕ ಡಿಕೆ ಶಿವಕುಮಾರ್ಗೆ ಟೆನ್ಷನ್ ಶುರುವಾಗಿದೆ.