ಮೈಸೂರು, ಮೇ 22 (Daijiworld News/SM): ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಇವುಗಳನ್ನು ಉಳಿಸುವ ನಿಟ್ಟಿನಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ನಡೆಸದಂತೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಕ್ಕಳ ಪೋಷಕರಿಗೆ ಇಂಗ್ಲೀಶ್ ಮಾಧ್ಯಮದತ್ತ ಒಲವಿದ್ದು, ಇದು ಉತ್ತಮ ಬೆಳವಣಿಗೆಯಲ್ಲ. ಆರ್ಥಿಕವಾಗಿ ಹಿಂದುಳಿದವರು ತಮ್ಮ ಮಕ್ಕಳು ಇಂಗ್ಲಿಷ್ ಶಾಲೆಯಲ್ಲಿ ಕಲಿಯಲಿ ಎಂದು ಇಚ್ಛಿಸುತ್ತಾರೆ. ಇಂಗ್ಲೀಷನ್ನು ಭಾಷೆಯಾಗಿ ಕಲಿಯಲು ಯಾರ ವಿರೋಧವೂ ಇಲ್ಲ. ಆದರೆ, ಇಂಗ್ಲೀಶ್ ಮಾಧ್ಯಮ ಬೇಡ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಭೋದನೆಗೆ ನಾನು ವಿರೋಧಿಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾನು ಚರ್ಚೆ ನಡೆಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.