ಮೈಸೂರು, ಮೇ22(Daijiworld News/SS): ಮತಯಂತ್ರಗಳು ದುರ್ಬಳಕೆ ಆಗಿರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವಿಎಂ ದುರ್ಬಳಕೆ ಆಗಿರುವ ಸಾಧ್ಯತೆ ಇದೆ. ಎಲ್ಲಾ ಸಮೀಕ್ಷೆಗಳು ಹೇಗೆ ಏಕ ಪ್ರಕಾರ ಆಗಲು ಸಾಧ್ಯವಿಲ್ಲ. ನಾನೇ 24 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೆ. ಅಲ್ಲಿನ ಜನರ ಅಭಿಪ್ರಾಯ ಅರ್ಥ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ನಾಲ್ಕೈದು ಸ್ಥಾನ ಬರುತ್ತದೆ ಎಂದರೆ ಹೇಗೆ ನಂಬಲು ಸಾಧ್ಯ...? ಬಹುತೇಕ ಎಲ್ಲಾ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಮಹಾ ಚುನಾವಣೆಯಲ್ಲಿ ಮಾತ್ರ ಗೆಲ್ಲಲು ಹೇಗೆ ಸಾಧ್ಯ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ವಿದ್ಯುನ್ಮಾನ ಮತಯಂತ್ರ ದುರ್ಬಲಕೆ ಆಗುವುದು ಸಾಧ್ಯ. ಇದನ್ನು ನಾವು ಹೇಳುತ್ತಿಲ್ಲ. ಕೆಲವು ವರ್ಷಗಳ ಹಿಂದೆ ಬಿಜೆಪಿಯೇ ಹೇಳಿದ್ದು, ಅದರ ಸಂಸದರೇ ಈ ಬಗ್ಗೆ ಪುಸ್ತಕ ಬರೆದಿದ್ದಾರೆ. ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದು ಬಿಜೆಪಿ. ಆ ಪಕ್ಷದ ವಕ್ತಾರ ಜಿವಿಎಲ್ ನರಸಿಂಹರಾವ್ ಈ ಬಗ್ಗೆ ಪುಸ್ತಕವನ್ನೇ ಬರೆದಿದ್ದರು. ಆ ಅನುಮಾನವನ್ನು ಬೆಂಬಲಿಸಿ ಎಲ್.ಕೆ.ಅಡ್ವಾಣಿ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರು ಎಂದು ಹೇಳಿದರು.