ತುಮಕೂರು, ಮೇ 23(Daijiworld News/SM): ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ತುಮಕೂರಿನಲ್ಲಿ ಸ್ಪರ್ಧಿಸಿದ್ದ ದೊಡ್ಡಗೌಡರಿಗೆ ತೀವ್ರ ಮುಖಭಂಗವುಂಟಾಗಿದೆ. ತುಮಕೂರು ಕ್ಷೇತ್ರದಲ್ಲಿ ಬಸವರಾಜ್ ಅವರು ಗೆಲುವು ದಾಖಲಿಸುವ ಮೂಲಕ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ತೀವ್ರ ಆಘಾತ ನೀಡಿದ್ದಾರೆ.
ಬಸವರಾಜ್ ಅವರು ಹೆಚ್. ಡಿ. ದೇವೇಗೌಡ ವಿರುದ್ಧ 13339 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇನ್ನು ಕಳೆದ ಹಲವು ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ದಾಖಲಿಸಿಕೊಂಡಿರುವ ದೇವೇಗೌಡ ಅವರು ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದರು. ಇದೇ ಕಾರಣದಿಂದ ತಾನು ಸ್ಪರ್ಧಿಸುವ ಕ್ಷೇತ್ರವಾದ ಹಾಸನವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಮೊಮ್ಮಗನಿಗೆ ಕ್ಷೇತ್ರ ನೀಡಿದ ಬಳಿಕ ತುಮಕೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ದೊಡ್ಡಗೌಡರು ಅಲ್ಲಿಂದ ಸ್ಪರ್ಧಿಸಿ ಅಂತಿಮವಾಗಿ ಹೀನಾಯವಾಗಿ ಸೋಲನುಭವಿಸಿದ್ದಾರೆ.
ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ ಬಸವರಾಜ್ ವಿರುದ್ಧ ದೇವೇಗೌಡರು 15,433 ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಪ್ರಾರಂಭದಲ್ಲಿ ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 7 ನೇ ಸುತ್ತಿನ ಮತ ಎಣಿಕೆ ವೇಳೆಗೆ ತೀವ್ರ ಹಿನ್ನಡೆ ಎದುರಿಸಿರುವ ಮಾಜಿ ಪ್ರಧಾನಿ ದೇವೇಗೌಡ, ತೀವ್ರ ಮುಖಭಂಗ ಎದುರಿಸಿದ್ದಾರೆ.
ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ, ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ವಿರೋಧಕ್ಕೂ ಗುರಿಯಾಗಿದ್ದರು. 2014 ರಲ್ಲಿ ಸಂಸದರಾಗಿ ಆಯ್ಕೆಗೊಂಡಿದ್ದ ಕಾಂಗ್ರೆಸ್ ನ ಮುದ್ದ ಹನುಮೇಗೌಡ, ಮಧುಗಿರಿ ಕ್ಷೇತ್ರದ ಶಾಸಕ ಕೆಎನ್ ರಾಜಣ್ಣ ಸೇರಿದಂತೆ ಹಲವು ನಾಯಕರು ದೇವೇಗೌಡ ತುಮಕೂರಿನಿಂದ ಸ್ಪರ್ಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಇನ್ನು ಸೋಲಿನ ಬಳಿಕ ಪ್ರತಿಕ್ರಿಯೆ ನೀಡಿರುವ ಹೆಚ್ ಡಿಡಿ, ಜನರು ನೀಡಿರುವ ತೀರ್ಪನ್ನು ಗೌರವಿಸುವುದಾಗಿ ತಿಳಿಸಿದ್ದಾರೆ.